ಸಾಂದರ್ಭಿಕ ಚಿತ್ರ | PC : Image by onlyyouqj on Magnific

ಬೆಂಗಳೂರು : ವಾರಾಂತ್ಯ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈರುತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಎರಡೂ ಮಾರ್ಗಗಳಲ್ಲಿ ತಲಾ ಎರಡು ವಿಶೇಷ ರೈಲು ಸಂಚಾರಗಳನ್ನು ನಡೆಸಲಿದೆ.

ರೈಲು ಸಂಖ್ಯೆ 06589 ಬೆಂಗಳೂರು ಕಂಟೋನ್ಮೆಂಟ್-ಬೀದರ್ ವಿಶೇಷ ಎಕ್ಸ್ ಪ್ರೆಸ್ ರೈಲು ಅ.9 ಮತ್ತು 16ರಂದು ಬೆಂಗಳೂರು ಕಂಟೋನ್ಮೆಂಟ್‍ನಿಂದ ರಾತ್ರಿ 11 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2.15 ಗಂಟೆಗೆ ಬೀದರ್ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06590 ಬೀದರ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಅ.10 ಮತ್ತು 17ರಂದು ಬೀದರ್ ನಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 9.45 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಮಾರ್ಗಮಧ್ಯದಲ್ಲಿ ಈ ರೈಲು ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಾಬಾದ, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 19 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 1 ಎಸಿ 2-ಟೈರ್ ಬೋಗಿ, 3 ಎಸಿ 3-ಟೈರ್ ಬೋಗಿಗಳು, 10 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಜನರಲ್ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ದಿವ್ಯಾಂಗ ಸ್ನೇಹಿ ಕಂಪಾರ್ಟ್‍ಮೆಂಟ್‍ಗಳನ್ನು ಹೊಂದಿರುವ ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್‍ಗಳು ಇರಲಿವೆ.

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ ಪ್ರೆಸ್ ರೈಲು: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ಎರಡೂ ಮಾರ್ಗಗಳಲ್ಲಿ ತಲಾ ಒಂದು ವಿಶೇಷ ಎಕ್ಸ್‌ ಪ್ರೆಸ್ ರೈಲು ಸಂಚಾರ ನಡೆಯಲಿದೆ.

ರೈಲು ಸಂಖ್ಯೆ 06563 ಎಸ್‍ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ ಪ್ರೆಸ್ ರೈಲು ಅ.16ರಂದು ಎಸ್‍ಎಂವಿಟಿ ಬೆಂಗಳೂರಿನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ. ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 06564 ಬೆಳಗಾವಿ-ಎಸ್‍ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ ಪ್ರೆಸ್ ರೈಲು ಅ.17ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5 ಗಂಟೆಗೆ ಎಸ್‍ಎಂವಿಟಿ ಬೆಂಗಳೂರು ತಲುಪಲಿದೆ.

ಮಾರ್ಗಮಧ್ಯದಲ್ಲಿ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‍ಎಂಎಂ ಹಾವೇರಿ, ಎಸ್‍ಎಸ್‍ಎಂ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 18 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 8 ಸ್ಲೀಪರ್ ಕ್ಲಾಸ್, 4 ಜನರಲ್ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ದಿವ್ಯಾಂಗ ಸ್ನೇಹಿ ಕಂಪಾರ್ಟ್‍ಮೆಂಟ್‍ಗಳನ್ನು ಹೊಂದಿರುವ ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್‍ಗಳು ಇರಲಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor