×
Ad

ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

Update: 2025-11-21 20:44 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ವಾರಾಂತ್ಯಗಳಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕಲಬುರಗಿ ನಡುವೆ ಆರು ಟ್ರಿಪ್‍ಗಳ ವಿಶೇಷ ಎಕ್ಸ್‌ ಪ್ರೆಸ್ ರೈಲುಗಳನ್ನು ನಿರ್ವಹಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06207 ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ ವಿಶೇಷ ಎಕ್ಸ್‌ ಪ್ರೆಸ್ ರೈಲು ನ.22 ರಿಂದ ಡಿ.27ರವರೆಗೆ ಪ್ರತಿ ಶನಿವಾರದಂದು ರಾತ್ರಿ 7.20 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್‍ನಿಂದ ಹೊರಡಲಿದೆ ಮತ್ತು ಮರುದಿನ ಬೆಳಗ್ಗೆ 7.30ಕ್ಕೆ ಕಲಬುರಗಿಯನ್ನು ತಲುಪಲಿದೆ.

ಮತ್ತೆ, ರೈಲು ಸಂಖ್ಯೆ 06208 ಕಲಬುರಗಿ-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ ಪ್ರೆಸ್ ರೈಲು ನ.23 ರಿಂದ ಡಿ.28ರವರೆಗೆ ಪ್ರತಿ ರವಿವಾರ ಬೆಳಗ್ಗೆ 9.35 ಗಂಟೆಗೆ ಕಲಬುರಗಿಯಿಂದ ಹೊರಟು, ಅದೇ ದಿನ ರಾತ್ರಿ 8.30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಮಾರ್ಗದಲ್ಲಿ, ಈ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಈ ರೈಲು 20 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು 2 ಸೆಕೆಂಡ್ ಲಗೇಜ್ ಕಮ್ ಬ್ರೇಕ್ ವ್ಯಾನ್/ವಿಕಲಚೇತನ ಸ್ನೇಹಿ ಬೋಗಿಗಳನ್ನು ಒಳಗೊಂಡಿರಲಿದೆ.

ಕಿರ್ಲೋಸ್ಕರವಾಡಿಯಲ್ಲಿ ವಂದೇ ಭಾರತ್ ಎಕ್ಸ್‌ ಪ್ರೆಸ್‍ಗೆ ನಿಲುಗಡೆ: ನ.24ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 20669/20670 ಎಸ್‍ಎಸ್‍ಎಸ್ ಹುಬ್ಬಳ್ಳಿ-ಪುಣೆ-ಎಸ್‍ಎಸ್‍ಎಸ್ ಹುಬ್ಬಳ್ಳಿ ಟ್ರೈ-ವೀಕ್ಲಿ ವಂದೇ ಭಾರತ್ ಎಕ್ಸ್‌ ಪ್ರೆಸ್‍ಗೆ ಕಿರ್ಲೋಸ್ಕರವಾಡಿ ನಿಲ್ದಾಣದಲ್ಲಿ ನಿಲುಗಡೆ ಒದಗಿಸಲಾಗಿದೆ. ರೈಲು ಸಂಖ್ಯೆ 20669 ಎಸ್‍ಎಸ್‍ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್‌ ಪ್ರೆಸ್ ಬೆಳಗ್ಗೆ 9.38 ಗಂಟೆಗೆ ಕಿರ್ಲೋಸ್ಕರವಾಡಿ ತಲುಪಿ, 9.40 ಗಂಟೆಗೆ ಅಲ್ಲಿಂದ ಹೊರಡಲಿದೆ.

ರೈಲು ಸಂಖ್ಯೆ 20670 ಪುಣೆ-ಎಸ್‍ಎಸ್‍ಎಸ್ ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ ಪ್ರೆಸ್ ಸಂಜೆ 5.43 ಗಂಟೆಗೆ ಕಿರ್ಲೋಸ್ಕರವಾಡಿ ತಲುಪಿ, 5.45 ಗಂಟೆಗೆ ಅಲ್ಲಿಂದ ಹೊರಡಲಿದೆ. ಪ್ರಯಾಣಿಕರು ಹೊಸದಾಗಿ ಒದಗಿಸಲಾದ ಈ ನಿಲುಗಡೆಯನ್ನು ಗಮನಿಸಿ, ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈಲ್ವೆ ಇಲಾಖೆ ಪ್ರಕಟಣೆ ಕೋರಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News