×
Ad

ವಿಪಕ್ಷ ನಾಯಕನ ಸ್ಥಾನಕ್ಕೆ ವಿಶೇಷ ವ್ಯಕ್ತಿಯನ್ನು ಘೋಷಣೆ ಮಾಡ್ತಾರೆ, ಕಾದು ನೋಡಿ: ಕುತೂಹಲ ಕೆರಳಿಸಿದ ಮುರುಗೇಶ್‌ ನಿರಾಣಿ ಹೇಳಿಕೆ

Update: 2023-07-08 14:36 IST

ಬೆಳಗಾವಿ:  'ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ವಿಶೇಷ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತಾರೆ, ಕಾದು ನೋಡಿ' ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಶನಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,' ಸೂಕ್ತ ಮತ್ತು ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಕಾರಣದಿಂದ ಮಾತ್ರ ವಿರೋಧ ಪಕ್ಷದ ನಾಯಕನ ಆಯ್ಕೆ ತಡವಾಗಿದೆ. ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಪಕ್ಷ ಯತ್ನಾಳ್‌ ಸೇರಿ ಯಾರನ್ನೇ ಆಯ್ಕೆ ಮಾಡಿದರೂ ತುಂಬು ಹೃದಯದಿಂದ ಸ್ವಾಗತಿಸುತ್ತೇವೆ' ಎಂದರು.

''ಕಳೆದುಕೊಂಡ ಜಾಗದಲ್ಲೇ ಗೆಲುವು ಹುಡುಕ್ತೀನಿ''

ಲೋಕಸಭಾ ಚುನಾವಣೆಗೆ ಸ್ಪರ್ಧೆಯ ಕುರಿತು ಪ್ರತಿಕ್ರಿಯಿಸಿದ ನಿರಾಣಿ, ವೈಯಕ್ತಿಕವಾಗಿ ನನಗೆ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಆಸಕ್ತಿ ಇದೆ. ಎಲ್ಲಿ ಕಳೆದುಕೊಂಡಿದ್ದೇನೆ, ಅಲ್ಲಿಯೇ ಪಡೆದುಕೊಳ್ಳುವ ಸ್ವಭಾವ ನನ್ನದು. ಆದರೂ, ರಾಜ್ಯ, ರಾಷ್ಟ್ರ ನಾಯಕರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News