×
Ad

ಹೃದಯಾಘಾತದಿಂದ ಎಸೆಸೆಲ್ಸಿ ವಿದ್ಯಾರ್ಥಿನಿ ಮೃತ್ಯು

Update: 2023-08-09 14:34 IST

ಮೃತ ವಿದ್ಯಾರ್ಥಿನಿ 

ಚಾಮರಾಜನಗರ: ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಗ್ಗೆ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ಎಸ್ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಸಿಎಂಎಸ್ ಅನಾಥಾಲಯದಲ್ಲಿ ವಾಯು ವಿಹಾರ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆನ್ನಲಾಗಿದೆ.

ನಂತರ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ವೈದ್ಯರು ತಪಾಸಣೆಗೆ ಒಳಪಡಿಸಿದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

ಮೃತ ವಿದ್ಯಾರ್ಥಿನಿ ಫಿಲಿಶ್(15) ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದು, ತಂದೆ ಪ್ರಭು ಕಳೆದ ಐದಾರು ವರ್ಷಗಳಿಂದ ವ್ಯಾಸಂಗಕ್ಕಾಗಿ ಪಟ್ಟಣದ ಸಿಎಂಎಸ್ ಅನಾಥಾಲಯಕ್ಕೆ ತಂದು ಬಿಟ್ಟಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದು, ಬಾಲಕಿ ದಿಢೀರ್ ಕುಸಿದು ಬಿದ್ದು ಹೃದಯಾಘಾತವಾಗಿರುವುದು ನಮಗೆಲ್ಲರಿಗೂ ಆಘಾತವಾಗಿದೆ‌ ಎಂದು ತಿಳಿಸಿದರು.

ಬಾಲಕಿಯ ಮೃತದೇಹ ಪಟ್ಟಣದ ಶವಾಗಾರಕ್ಕೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News