×
Ad

ಇನ್ನೂ ಎಂಟು ಮಂದಿ ಬಿಜೆಪಿ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ : ಎಸ್.ಟಿ.ಸೋಮಶೇಖರ್

Update: 2024-10-24 21:21 IST

ಬೆಂಗಳೂರು : ಪ್ರತಿಪಕ್ಷ ಬಿಜೆಪಿ ಮುಖಂಡರ ವರ್ತನೆಯಿಂದ ಬೇಸರಗೊಂಡಿರುವ ಬೆಂಗಳೂರಿನ ಇಬ್ಬರು ಸೇರಿ ಇನ್ನೂ 8 ಮಂದಿ ಬಿಜೆಪಿಯ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಯೋಗೇಶ್ವರ್ ಅವರಿಂದ ದುಡಿಸಿಕೊಂಡು ಇದೀಗ ಬಿಜೆಪಿ ನಾಯಕರು ಅವರನ್ನು ಕೈಬಿಟ್ಟಿದ್ದಾರೆ. ನನ್ನ ಮೇಲೆ ಯಾವುದೇ ರೀತಿಯ ಶಿಸ್ತು ಕ್ರಮ ಜರುಗಿಸಿದರೂ ನನಗೆ ಭಯವಿಲ್ಲ ಎಂದು ನುಡಿದರು.

‘ನನಗೆ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಹೀಗಾಗಿ ನಾನು ಬಿಜೆಪಿ ಶಾಸಕನಾಗಿದ್ದರೂ ಅಭಿವೃದ್ಧಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ರನ್ನು ಭೇಟಿಯಾಗುತ್ತಿರುತ್ತೇನೆ. ಯೋಗೇಶ್ವರ್ ವಿಚಾರದಲ್ಲಿ ಪಕ್ಷ ಈ ರೀತಿ ಮಾಡಬಾರದಿತ್ತು ಎಂದು ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News