×
Ad

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ | ನ್ಯಾ.ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್‌ಗೆ ಡಿಎನ್ಎ ಅರ್ಜಿ

Update: 2025-07-24 21:26 IST

ಬೆಂಗಳೂರು : ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ವರದಿ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ಡಿಎನ್‌ಎ ಎಂಟರ್​ಟೈನ್‌ಮೆಂಟ್‌ ನೆಟ್ವರ್ಕ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.

ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿ ಏಕಪಕ್ಷೀಯವಾಗಿದೆ. ಅರ್ಜಿದಾರರ ವರ್ಚಸ್ಸಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಪೂರ್ವಯೋಜಿತವಾಗಿಯೇ ವರದಿ ಲೀಕ್ ಮಾಡಲಾಗಿದೆ. ಹೀಗಾಗಿ ವರದಿಯೇ ಕಾನೂನು ಬಾಹಿರವೆಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News