×
Ad

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ದುರಂತ | ಬೆಂಗಳೂರು ನಗರ ಪೊಲೀಸ್ ಕಮೀಷನರ್‌ ಸೇರಿದಂತೆ ಹಲವು ಅಧಿಕಾರಿಗಳು ಅಮಾನತು

Update: 2025-06-05 22:23 IST

ಬಿ.ದಯಾನಂದ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ, ಉಪ ಮುಖ್ಯಮಂತ್ರಿ, ಹಿರಿಯ ಸಚಿವರು, ಮುಖ್ಯಮಂತ್ರಿಯ ಕಾನೂನು ಸಲಹೆಗಾರ, ಅಡ್ವೊಕೇಟ್ ಜನರಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ ಬಳಿಕ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿ ಅವರು ಮಾತನಾಡಿದರು.

ಯಾರೆಲ್ಲ ಅಮಾನತು :

ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ , ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್, ಕಬ್ಬನ್ ಪಾರ್ಕ್ ವಿಭಾಗದ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ನಿರ್ಲಕ್ಷ್ಯತನ ಕಂಡುಬರುತ್ತಿದೆ. ನಿನ್ನೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡಿದ್ದರು. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬದವರ ಜೊತೆ ಸರಕಾರವಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ಮೂರು ಸಂಸ್ಥೆಗಳ ವಿರುದ್ಧ ಸಿಐಡಿ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News