ಮೆಕ್ಕೆಜೋಳದ ಗರಿಷ್ಠ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ : ರಾಜ್ಯ ಸರಕಾರ ಆದೇಶ
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ರವಿವಾರ ರಾಜ್ಯ ಸರಕಾರವು ಪ್ರತಿ ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 24 ಸಾವಿರ ರೂಪಾಯಿಯಂತೆ ಖರೀದಿಸಲು ಆದೇಶ ಹೊರಡಿಸಲಾಗಿತ್ತು. ಖರೀದಿ ಪ್ರಮಾಣವನ್ನು ಹೆಚ್ಚಿಸುವಂತೆ ರೈತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡಲಾಗಿದೆ.
ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿತವಾಗಿರುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 50 ಕ್ವಿಂಟಾಲ್ ಮೆಕ್ಕೆಜೋಳವನ್ನು ಸಮೀಪದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಖರೀದಿಗೆ ಆದ್ಯತೆ ನೀಡಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.