ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
Update: 2026-05-19 18:13 IST
ಬೆಂಗಳೂರು: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಹರ್ಷ ಗುಪ್ತ ಅವರನ್ನು ರಾಜ್ಯ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ನಾಗರಾಜ ಎನ್.ಎಂ. ಅವರನ್ನು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಒಂಬುಡ್ಸ್ ಮನ್, ಕಲಬುರಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ್ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.