×
Ad

ಧರ್ಮಸ್ಥಳ ದೂರು: ಎಸ್‍ಐಟಿಗೆ ಪೊಲೀಸ್ ಠಾಣಾ ಅಧಿಕಾರ ನೀಡಿ ರಾಜ್ಯ ಸರಕಾರ ಆದೇಶ

Update: 2025-08-08 21:36 IST

ಬೆಂಗಳೂರು: ಧರ್ಮಸ್ಥಳ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‍ಐಟಿ) ಪೊಲೀಸ್ ಠಾಣಾ ಮಟ್ಟದ ಅಧಿಕಾರವನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಎಸ್‍ಐಟಿಗೆ ಪೊಲೀಸ್ ಠಾಣಾ ಅಧಿಕಾರ ನೀಡಿರುವುದರಿಂದ ಸ್ವತಂತ್ರವಾಗಿ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಬಹುದಾಗಿದೆ. ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ನಿಗೂಢ ಕೊಲೆ, ಆತ್ಮಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಹಿಂದಿನ ಪ್ರಕರಣಗಳನ್ನ ಮರುತನಿಖೆ ನಡೆಸಬಹುದಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಅನಾಮಿಕ ದೂರುದಾರ ನೂರಾರು ಶವಗಳನ್ನ ಹೂತಿರುವುದಾಗಿ ಹೇಳಿಕೆ ನೀಡಿದ್ದರಿಂದ ಆತ, ಎಸ್‍ಐಟಿಗೆ ತೋರಿಸಿ, ಗುರುತಿಸಲಾದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯನಡೆಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಮೃತರ ಅಸ್ತಿಪಂಜರಗಳು ದೊರೆತಿವೆ. ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್)ಕ್ಕೆ ರವಾನಿಸಲಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ತನಿಖೆಗೆ ಎಡಿಜಿಪಿ ಡಾ.ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ರಾಜ್ಯ ಸರಕಾರ ಎಸ್‍ಐಟಿ ರಚನೆ ಮಾಡಿದ್ದು, ಅನಾಮಿಕ ವ್ಯಕ್ತಿಯ ದೂರನ್ನು ಆಧರಿಸಿ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News