×
Ad

ಮೋದಿ ವಿರುದ್ಧ ಹೇಳಿಕೆ ಪ್ರಕರಣ: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗೆ ಹಾಜರಾದ ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ

Update: 2023-09-07 23:07 IST

ಫೋಟೊ - ಟ್ವಿಟರ್- @jigneshmevani80

ಬೆಂಗಳೂರು, ಸೆ.7: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ವಡಗಾವ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಗೆ ಗುರುವಾರ ಹಾಜರಾದರು.

ಈ ಹಿಂದೆ ಚಿತ್ರದುರ್ಗದಲ್ಲಿ ನಡೆದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೇವಾನಿ ಅವರು, ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾಗ ಕುರ್ಚಿಗಳನ್ನು ತೂರಿ ಗದ್ದಲ ಮಾಡಿ ಎಂದು ಪ್ರಚೋದನಕಾರಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಬಿಜೆಪಿ ಮುಖಂಡ ಕೆ.ಎಸ್.ನವೀನ್ ಅವರು ನೀಡಿದ ದೂರಿನ ಆಧಾರದ ಮೇಲೆ ಜಿಗ್ನೇಶ್ ಮೇವಾನಿ ಹಾಗೂ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾ ಸಂಚಾಲಕ ಟಿ.ಷಫೀಉಲ್ಲಾ ಅವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಅಲ್ಲದೆ, ನವೀನ್ ಅವರು ಗುಜರಾತ್ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News