×
Ad

ರೈತರ ಬಗ್ಗೆ ಹೇಳಿಕೆ: ಸಚಿವರ ಬೇಷರತ್ ಕ್ಷಮೆಗೆ ಆಗ್ರಹಿಸಿದ ಮಾಜಿ ಸಿಎಂ ಕುಮಾರಸ್ವಾಮಿ

Update: 2023-12-25 13:48 IST

ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯವಾದದ್ದು, ರೈತರ ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ‌ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, " ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತಾಡಬೇಕು" ಎಂದು ಹೇಳಿದ್ದಾರೆ.

ʼನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕುʻ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News