ಬೆಂಗಳೂರು : ಸದ್ಯ ರಾಜ್ಯದಲ್ಲಿ ʼಸ್ಟಿಂಗ್ ಆಪರೇಶನ್ʼ ಸಂಬಂಧ ದೊಡ್ಡ ಚರ್ಚೆಯೇ ನಡೆಯುತ್ತಿದೆ. ಇದರ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ 18 ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದ್ದು, ನಾಳೆ ಅದೇಶ ಹೊರಬೀಳಲಿದೆ.

ತಡೆಯಾಜ್ಞೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿ 42 ಮಾಧ್ಯಮಗಳನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಈ ಅರ್ಜಿಯ ವಿಚಾರಣೆ ನಾಳೆ 18 ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯಲಿದೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ʼಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ಟಿಂಗ್ ಅಪರೇಷನ್ ಮಾಡಲಾಗಿತ್ತುʼ ಎಂದು ಹೇಳಿದ್ದರು. ಇದರ ಬೆನ್ನೆಲ್ಲೇ ಸಿದ್ದರಾಮಯ್ಯ ಕೂಡ ನಿನ್ನೆ ಸ್ಟಿಂಗ್ ಆಪರೇಶನ್ ನಡೆಯುತ್ತಿರುವುದು ನಿಜ ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಗೊತ್ತಾಗಬೇಕಿದೆ ಎಂದಿದ್ದರು.

ಈಗ ಮಾಜಿ ಸಿಎಂ ಸಿದ್ದರಾಮಯ್ಯ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ತಡೆಯಾಜ್ಞೆ ತೆಗೆದುಕೊಳ್ಳುತ್ತಿದ್ದೇವೆ: ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕುಟುಕು ಕಾರ್ಯಾಚರಣೆ (ಸ್ಟಿಂಗ್ ಆಪರೇಷನ್) ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಅದಕ್ಕಾಗಿ ತಡೆಯಾಜ್ಞೆ ತೆಗೆದುಕೊಳ್ಳುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆ ವಿರೋಧಿಸಿ, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ರಾಹುಲ್ ಗಾಂಧಿ ಅವರು ಹೊಸದಿಲ್ಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಹೋಗಬೇಕಿತ್ತು ಸಾಧ್ಯವಾಗಲಿಲ್ಲ ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor