ಕಲ್ಲು ತೂರಾಟ ಪ್ರಕರಣ | ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ; ವದಂತಿಗೆ ಕಿವಿಗೊಡಬೇಡಿ: ಶಿವಮೊಗ್ಗ ಎಸ್ಪಿ ಮನವಿ
Update: 2023-10-01 22:33 IST
ಎಸ್ಪಿ ಮಿಥುನ್ ಕುಮಾರ್
ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲೂ ತೂರಾಟ ನಡೆದಿದ್ದು,ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿರುವ ಅವರು, ʼಸಂಜೆ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದೆ. ಗುಂಪುಗಳನ್ನು ಚದುರಿಸಲಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆʼ ಎಂದು ತಿಳಿಸಿದ್ದಾರೆ.
ಕಲ್ಲು ತೂರಾಟ ವೇಳೆ ಸುಮಾರು 4 ರಿಂದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ರಾಗಿ ಗುಡ್ಡದಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಎಸ್ಪಿ ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.