×
Ad

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಗೆ ಕಠಿಣ ನಿಯಮ: ಅಧಿಕಾರಿಗಳೊಂದಿಗೆ ಸಚಿವ ತಂಗಡಗಿ ಸಭೆ

Update: 2024-01-07 18:48 IST

Photo:X/@sstangadagi

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಗೆ ನಿಯಮ ರೂಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಕಾಸಸೌಧಲ್ಲಿ ಸಭೆ ನಡೆಸಿದರು.

ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೈಗಾರಿಕೆ ಇಲಾಖೆ, ಗೃಹ ಇಲಾಖೆ ಹಾಗೂ ಕಾನೂನು ಇಲಾಖೆ ಅಧಿಕಾರಿಗಳ ಜತೆ ಶಿವರಾಜ್ ತಂಗಡಗಿ ಸುದೀರ್ಘವಾಗಿ ಚರ್ಚೆ ನಡೆಸಿದರು.

ಅಧಿಕಾರಿಗಳೊಂದಿಗಿನ ಸಭೆ ಬಳಿಕ ಮಾತನಾಡಿದ ಶಿವರಾಜ್ ತಂಗಡಗಿ, ಕೇವಲ ದಂಡ, ನೋಟಿಸ್ ನೀಡಿಕೆ ಮಾತ್ರವಲ್ಲ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ನಿಯಮ ಇರಲಿದೆ. ಮುಂದಿನ ಸಭೆ ಬಳಿಕ ಶೀಘ್ರವೇ ನಿಯಮಗಳ ಆದೇಶ ಹೊರಡಿಸಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಡಾ.ಏಕ್ ರೂಪ್ ಕೌರ್, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ರವಿ, ಇಲಾಖೆಯ ನಿರ್ದೇಶಕರಾದ ಡಾ.ಕೆ.ಧರಣಿದೇವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News