×
Ad

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಉಪನ್ಯಾಸಕ ಸೆರೆ

Update: 2023-11-14 16:33 IST

ಸಾಂದರ್ಭಿಕ ಚಿತ್ರ

ಬೆಂಗಳೂರು, ನ.14: ಕೆಲಸ ಕೊಡಿಸುವುದಾಗಿ ನಂಬಿಸಿ ಹೋಟೆಲ್ ಗೆ ಕೊರೆದೊಯ್ದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಕಾಲೇಜಿನ ಉಪನ್ಯಾಸ ಮದನ್ ಕುಮಾರ್ ಎಂಬಾತನನ್ನು ಇಲ್ಲಿನ ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕ ಆಗಿರುವ ಮದನ್ ಕುಮಾರ್ ಗೆ ಅದೇ ಕಾಲೇಜಿನ ವಿದ್ಯಾರ್ಥಿನಿ ಪಾರ್ಟ್ ಟೈಮ್ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದ್ದಳು. ಇದನ್ನೆ ಬಂಡವಾಳ ಮಾಡಿಕೊಂಡು ಆರೋಪಿ ಮದನ್ ಕುಮಾರ್, ವಿದ್ಯಾರ್ಥಿನಿಯನ್ನು ಕೆಲಸ ಕೊಡಿಸುವುದಾಗಿ ನಂಬಿಸಿ ಎಂಜಿ ರಸ್ತೆಯಲ್ಲಿ ಸಂದರ್ಶನ ಇದೆ ಎಂದು ಹೊಟೇಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎನ್ನಲಾಗಿದೆ.

ಅಲ್ಲದೇ ವಿಡಿಯೋ ಮಾಡಿ ಸಂತ್ರಸ್ತೆಗೆ ಬೆದರಿಕೆವೊಡ್ಡಿದ್ದ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News