×
Ad

ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Update: 2023-09-05 13:31 IST

ಪುನೀತ್ - ಮೃತ ವಿದ್ಯಾರ್ಥಿ  

ಕೊಳ್ಳೇಗಾಲ. ಸೆ.5: ತಾಲೂಕಿನ ಶಿವನಸಮುದ್ರದ ಬಳಿಯಲ್ಲಿರುವ ಬರಚುಕ್ಕಿ ಜಲಪಾತಕ್ಕೆ ಪ್ರವಾಸ ಬಂದಿದ್ದ ಐವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಶಿವನಸಮುದ್ರದ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. 

ಬೆಂಗಳೂರಿನ ಸುಂಕದಕಟ್ಟೆ ವಾಸಿ ಪುನೀತ್ (18) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತನ ಸ್ನೇಹಿತ ಶಾಹೀಲ್ ಲೋಹಿತ್ ಎಂಬಾತ ಕೂಡ ಮುಳುಗುತ್ತಿದ್ದನ್ನು ಕಂಡು ಸ್ಥಳದಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆನ್ನಲಾಗಿದೆ.

ಅಗ್ನಿ ಶಾಮಕ ಸಿಬ್ಬಂದಿ ನೀರುಪಾಲಾಗಿದ್ದ ಪುನೀತ್ ಮೃತ ದೇಹವನ್ನ ಪತ್ತೆ ಹಚ್ಚಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ. ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ  ಈ ಸಂಬಂಧ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News