×
Ad

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ | ತನಿಖೆ ಸಿಐಡಿಗೆ ವಹಿಸಲು ಸಿಎಂ ಸೂಚನೆ

Update: 2024-06-24 20:19 IST

ಸಿಎಂ ಸಿದ್ದರಾಮಯ್ಯ/ ಪ್ರಭುದ್ಯಾ

ಬೆಂಗಳೂರು : ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ, ಮೃತ ಪ್ರಭುದ್ಯಾಳ ತಾಯಿ ಕೆ.ಆರ್.ಸೌಮ್ಯಾ ಅವರು ತಮ್ಮ ಪುತ್ರಿ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ಸಾಮಾಜಿಕ ಕಾರ್ಯಕರ್ತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೌಮ್ಯಾ ಅವರು, ಪದವಿ ಓದುತ್ತಿದ್ದ ನನ್ನ ಮಗಳನ್ನು ಯುವಕನೊಬ್ಬ ಕೊಲೆ ಮಾಡಿದ್ದಾನೆ. ಕೆಲವು ಅನುಮಾನಗಳಿದ್ದವು, ಆ ಯುವಕನಿಗೆ ಜಾಮೀನು ಕೂಡ ಸಿಕ್ಕಿದೆ. ಆರೋಪಿಗೆ ಜಾಮೀನು ಸಿಕ್ಕಿದೆಯೆಂದು ನಾವು ಸುಮ್ಮನಿದ್ದರೆ ಸರಿ ಹೋಗುವುದಿಲ್ಲ. ಹಾಗಾಗಿ ಸಿಐಡಿಗೆ ಕೊಡಬೇಕೆಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೆವು. ಮುಖ್ಯಮಂತ್ರಿಗಳು ಮನವಿ ಪುರಸ್ಕರಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News