×
Ad

ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ಘಟಕಕ್ಕೆ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ

Update: 2025-06-11 23:01 IST

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರವು ರಚಿಸಿದ್ದ ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಈ ಕಾರ್ಯಪಡೆಯಲ್ಲಿ ಒಟ್ಟು 248 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಇವು ಮೂರು ಕಂಪೆನಿಗಳಾಗಿ ಕಾರ್ಯ ನಿರ್ವಹಿಸಲಿವೆ. ಸದ್ಯಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಈ ವಿಶೇಷ ಕಾರ್ಯಪಡೆಯ ಹೊಣೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ. ಜೂ.13ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕಾರ್ಯಪಡೆಯನ್ನು ಉದ್ಘಾಟಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಈ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಧ್ಯಮದವರೊಂದಿಗೆ ಮಾತನಾಡಿ, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವುದಕ್ಕೆ ವಿಶೇಷ ಕಾರ್ಯಪಡೆ ಸಜ್ಜಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಈ ಕಾರ್ಯಪಡೆಯ ಕೇಂದ್ರ ಕಚೇರಿ ಮಂಗಳೂರಿನಲ್ಲೇ ಇರಲಿದೆ. ಕಾರ್ಯಪಡೆಯಲ್ಲಿ ತಲಾ 80 ಸಿಬ್ಬಂದಿಯನ್ನು ಒಳಗೊಂಡ ಮೂರು ಕಂಪೆನಿಗಳು ಇರಲಿವೆ ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News