×
Ad

ಮುರಘಾ ಶ್ರೀ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

Update: 2024-04-23 16:04 IST

ಚಿತ್ರದುರ್ಗಾ : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಜಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಸದ್ಯ ಜಾಮೀನ ಮೇಲೆ ಹೊರ ಇರುವ ಮುರುಘಾ ಶ್ರೀ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸುಪ್ರೀಂಕೋರ್ಟ್ ಸೂಚಿನೆ ನೀಡಿದೆ.

ಮುರುಘಾ ಮಠದ ಹಾಸ್ಟೆಲ್‌ನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳನ್ನು ಕಳೆದ ಸೆಪ್ಟಂಬರ್‌ 2ರಂದು (2022) ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗದಲ್ಲಿರುವ ಮುರುಘಾ ಮಠದಲ್ಲಿಯೇ ಇದ್ದಾಗ ರಾತ್ರಿ ವೇಳೆ ಮಠಕ್ಕೆ ದಾಳಿ ನಡೆಸಿದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಗಳನ್ನು ಬಂಧಿಸಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News