×
Ad

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

Update: 2024-07-15 13:55 IST

ಹೊಸದಿಲ್ಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಸಲ್ಲಿಸಿದ್ದ ಎಫ್‌ಐಆರ್‌ ಪ್ರಶ್ನಿಸಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿದೆ.

ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದ ಅಡಿಯಲ್ಲಿ 2018ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಜೂನ್‌ 10ರಂದು ಸುಪ್ರೀಂ ಕೋರ್ಟ್‌ ರದ್ದುಪಡಿಸಿತ್ತು. ಈ ಪ್ರಕರಣದಲ್ಲಿ ಈಡಿ ತನಗೆ ನೀಡಿದ್ದ ಸಮನ್ಸ್ ಪ್ರಶ್ನಿಸಿ ಡಿಕೆಶಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಸಮನ್ಸ್ ರದ್ದುಪಡಿಸಲು ನಿರಾಕರಿಸಿತ್ತು. ಇದನ್ನು ಸುಪ್ರೀಂ ಕೋರ್ಟ್‌ಗೆ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News