×
Ad

ಎಸ್‌.ಎನ್‌.ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

Update: 2026-02-27 13:02 IST

ಹೊಸದಿಲ್ಲಿ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ಮಧ್ಯಂತರ ತಡೆ ನೀಡಿದ್ದು, ಕಾಂಗ್ರೆಸ್​​ ಶಾಸಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ.

ಸುಬ್ಬಾರೆಡ್ಡಿ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಪೀಠವು ನಡೆಸಿತು. 

ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಫಿಡವಿಟ್, ಕೌಂಟರ್ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಕೋರ್ಟ್ 6 ವಾರಗಳ ಕಾಲಾವಕಾಶ ನೀಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News