×
Ad

ರಾಜ್ಯದಲ್ಲಿ 4.10 ಕೋಟಿ ಜನರ ʼಸಮೀಕ್ಷೆʼ ಪೂರ್ಣ

Update: 2025-10-05 20:52 IST

ಬೆಂಗಳೂರು, ಅ.5: ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇದುವರೆಗೂ ಶೇ.76.23ರಷ್ಟು ಸಮೀಕ್ಷೆಯು ಪೂರ್ಣಗೊಂಡಿದೆ.  4.10 ಕೋಟಿ ಜನರ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ರವಿವಾರದಂದು ಅಂಕಿ-ಅಂಶಗಳನ್ನು ಪ್ರಕಟಿಸಿದೆ.

ರಾಜ್ಯದಲ್ಲಿ ಒಟ್ಟು 1,43,77,978 ಕುಟುಂಬಗಳ ಸಮೀಕ್ಷೆಯನ್ನು ಮಾಡಬೇಕಾಗಿದೆ. ರವಿವಾರ ಒಂದೇ ದಿನ 6,77,647 ಕುಟುಂಬಗಳ ಸಮೀಕ್ಷೆ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 1,09,60,855 ಕುಟುಂಬಗಳ 4,10,89,916 ಜನರ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹೇಳಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 39,82,335 ಕುಟುಂಬಗಳಿದ್ದು, ಒಟ್ಟು 1,19,477 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಕೇಂದ್ರ ನಗರ ಪಾಲಿಕೆಯಲ್ಲಿ 14,288, ಪೂರ್ವ ನಗರ ಪಾಲಿಕೆಯಲ್ಲಿ 17,269, ಉತ್ತರ ನಗರ ಪಾಲಿಕೆಯಲ್ಲಿ 31,363, ದಕ್ಷಿಣ ನಗರ ಪಾಲಿಕೆಯಲ್ಲಿ 16,445, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 40,112 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ರವಿವಾರ ಒಂದೇ ದಿನ 95,024 ಕುಟುಂಬಗಳನ್ನು ಸಮೀಕ್ಷೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News