ರಾಜ್ಯದಲ್ಲಿ 4.47 ಕೋಟಿ ಜನರ ಸಮೀಕ್ಷೆ ಪೂರ್ಣ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಶೇ.83.22ರಷ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಪೂರ್ಣಗೊಂಡಿದೆ. ಇದುವರೆಗೂ ಒಟ್ಟು 4,47,34,261 ಮಂದಿ ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ. ಒಟ್ಟು 1,43,77,978 ಕುಟುಂಬಗಳ ಸಮೀಕ್ಷೆಯ ಗುರಿಯ ಗುರಿಯನ್ನು ಇಟ್ಟುಕೊಂಡಿದ್ದು, ಈಗ 1,19,65,700 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ.
ಮಂಗಳವಾರ ಒಂದೇ ದಿನ ರಾಜ್ಯದಲ್ಲಿ 3,57,197 ಕುಟುಂಬಗಳ ಸಮೀಕ್ಷೆ ಮುಕ್ತಾಯವಾಗಿದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇದುವರೆಗೂ 4,13,676 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಮಂಗಳವಾರ ಒಂದೇ ದಿನ 1,37,714 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ನಗರದಲ್ಲಿ ಒಟ್ಟು 39,82,335 ಕುಟುಂಬಗಳ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಹೇಳಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ಸಂಜೆ 7.30 ಗಂಟೆಯವರೆಗೆ ಸಮೀಕ್ಷೆ ನಡೆಸಲಾಗುತ್ತಿದೆ. ಕೇಂದ್ರ ನಗರ ಪಾಲಿಕೆಯಲ್ಲಿ 50,522, ಪೂರ್ವ ನಗರ ಪಾಲಿಕೆಯಲ್ಲಿ 59,362, ಉತ್ತರ ನಗರ ಪಾಲಿಕೆಯಲ್ಲಿ 1,04,706, ದಕ್ಷಿಣ ನಗರ ಪಾಲಿಕೆಯಲ್ಲಿ 63,819, ಪಶ್ಚಿಮ ನಗರ ಪಾಲಿಕೆಯಲ್ಲಿ 1,35,267 ಕುಟುಂಬಗಳ ಸಮೀಕ್ಷೆ ನಡೆದಿದೆ.
ನಾಗರಿಕರು ಸ್ವತಃ ಆನ್‍ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, https://kscbcselfdeclaration.karnataka.gov.in ವೆಬ್‍ಸೈಟ್‍ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.