×
Ad

ಟಿ20 ಟೂರ್ನಿ: ಮಹಾರಾಜ ಟ್ರೋಫಿ ಮುಡಿಗೇರಿಸಿಕೊಂಡ ಮೈಸೂರು ವಾರಿಯರ್ಸ್‌

Update: 2024-09-02 17:45 IST

ಬೆಂಗಳೂರು: ಮಹಾರಾಜ ಟ್ರೋಫಿ ಕ್ರಿಕೆಟ್ ಟಿ20 ಟೂರ್ನಿ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ ಮೈಸೂರು ವಾರಿಯರ್ಸ್‌ ಮಹಾರಾಜ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಫೈನಲ್‌ ಪಂದ್ಯದಲ್ಲಿ 45 ರನ್‌ಗಳ ಅಂತರದಿಂದ ಬೆಂಗಳೂರು ಬ್ಲಾಸ್ಟರ್ಸ್‌ ವಿರುದ್ಧ ಜಯಿಸಿದ ಮೈಸೂರು ತಂಡವು ಮಹಾರಾಜ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಬೆಂಗಳೂರು ತಂಡವು ಮೈಸೂರು ತಂಡವನ್ನು 207 ರನ್ ಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ. ಮೈಸೂರು ತಂಡದಲ್ಲಿ ಆರಂಭಿಕ ಬ್ಯಾಟರ್ ಎಸ್‌.ಯು. ಕಾರ್ತಿಕ್ ಮತ್ತು ಕರುಣ್ ನಾಯರ್ ಅವರು ಅರ್ಧಶತಕವನ್ನು ಬಾರಿಸಿ ಮಿಂಚಿದ್ದು, ಮೈಸೂರು ವಾರಿಯರ್ಸ್‌ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 207ರನ್‌ ಗಳಿಸಿದೆ.

 




ಮೈಸೂರು ತಂಡ ಗುರಿಯನ್ನು ಬೆನ್ನಟ್ಟಿದ ಮಯಾಂಕ್ ಅಗರವಾಲ್ ನಾಯಕತ್ವದ ಬೆಂಗಳೂರು ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 162 ರನ್‌ ಗಳಿಸಿ ಗೆಲುವಿನ ಗುರಿಯನ್ನು ತಲುಪುವಲ್ಲಿ ವಿಫಲವಾಗಿದೆ.

ಮೈಸೂರು ವಾರಿಯರ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಪಡೆದುಕೊಂಡಿದ್ದು, ಎಸ್‌.ಯು. ಕಾರ್ತಿಕ್ 71, ಕರುಣ್ ನಾಯರ್ 66, ಮನೋಜ್ ಭಾಂಡಗೆ ಔಟಾಗದೆ 44, ಎಂ.ಜಿ. ನವೀನ್ 44 ರನ್ ಗಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News