×
Ad

ಮೇ ತಿಂಗಳ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ : ಹೈಕೋರ್ಟ್‌ಗೆ ರಾಜ್ಯ ಸರಕಾರ ಮಾಹಿತಿ

Update: 2025-02-17 16:54 IST

ಸಾಂದರ್ಭಿಕ ಚಿತ್ರ | PTI

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ನಡೆಯದ ತಾಲ್ಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ಮುಂದಿನ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆ ಇದೆ.

3 ವರ್ಷಗಳಾದರೂ ಜಿ.ಪಂ., ತಾ.ಪಂ.ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನ್ಯಾಯಾಂಗ ನಿಂದನೆ‌ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.

ಈ ವೇಳೆ ಸರಕಾರದ ಪರವಾಗಿ ಮಾತನಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಸರಕಾರ ನಡೆಸುವುದಾಗಿ ತಿಳಿಸಿದರು.

ಸರಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹೇಳಿದರು. ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸರಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್, ಅರ್ಜಿಯನ್ನು ಇತ್ಯರ್ಥಪಡಿಸಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News