×
Ad

ಲ್ಯಾಂಡ್ ಲಾರ್ಡ್ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ : ಸಿಎಂ ಸಿದ್ದರಾಮಯ್ಯ ಸೂಚನೆ

Update: 2026-02-03 13:29 IST

PC: x.com/bunny_boy_Raghu

ಬೆಂಗಳೂರು: ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

 ಈ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, "ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ" ಎಂದಿದ್ದಾರೆ.

"ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ" ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News