ಅ.23ರಿಂದ ಟಿಇಟಿಗೆ ಅರ್ಜಿ ಸಲ್ಲಿಸಲು ಅವಕಾಶ
Update: 2025-10-18 19:03 IST
ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು, ಅ.18 : ಶಿಕ್ಷಕರ ಅರ್ಹತಾ ಪರೀಕ್ಷೆಗೆ(ಟಿಇಟಿ) ಅಧಿಸೂಚನೆ ಹೊರಡಿಸಲು ತಯಾರಿ ನಡೆಸಲಾಗುತ್ತಿದ್ದು, ಅ.23ರಿಂದ ನ.9ರ ವರೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿಕ್ಷಣ ಇಲಾಖೆಯು ಪ್ರಕಟನೆ ಹೊರಡಿಸಿದೆ.
ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರೆಯುತ್ತಿದ್ದು, ಈ ಪ್ರಕ್ರಿಯೆಯ ಭಾಗವಾಗಿ ಟಿಇಟಿಗೆ ಅಧಿಸೂಚನೆ ಹೊರಡಿಸಲಾಗುವುದು. ಪರೀಕ್ಷೆಯನ್ನು ಡಿ.7ರಂದು ನಡೆಸಲಾಗುತ್ತದೆ. ಡಿ.31ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ ಎಂದು ತಿಳಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.