×
Ad

ಕಷ್ಟಕಾಲದಲ್ಲಿ ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದ: ಸಂಸದ ಪ್ರತಾಪ್ ಸಿಂಹ

Update: 2024-01-12 15:50 IST

ಪ್ರತಾಪ ಸಿಂಹ ಮತ್ತು ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು: ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಪ್ರತಾಪ ಸಿಂಹ ಅವರು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ  ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಸಂಸದ, ‘ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದ ತಿಳಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಹಾಸನ ಬಳಿ ಅಕ್ರಮ ಮರಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಅವರ ಸೋದರನ ಬಂಧನವಾಗಿ ಬಳಿಕ ಬಿಡುಗಡೆಗೊಂಡಿದ್ದರು. ಸಂಸತ್‌ ಭವನದಲ್ಲಿ ಪ್ರತಾಪ್ ಸಿಂಹ ಹೆಸರಿನಲ್ಲಿ ಪಾಸ್ ತೆಗೆದುಕೊಂಡು ದುಷ್ಕರ್ಮಿಗಳು ಹೊಗೆ ಬಾಂಬ್‌ ದಾಳಿ ನಡೆಸಿದ್ದರು, ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ಸಂಸದರನ್ನು ಬೆಂಬಲಿಸಿ ಮಾತನಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News