ಸಮೀಕ್ಷೆ ಬಗ್ಗೆ ಅಂತಿಮ ತೀರ್ಮಾನ ಹಿಂದುಳಿದ ವರ್ಗದ ಆಯೋಗವೇ ಕೈಗೊಳ್ಳಲಿದೆ : ಸಿಎಂ ಸಿದ್ದರಾಮಯ್ಯ
ʼʼಆರ್ಥಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆʼʼ
Update: 2025-09-19 16:21 IST
ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ಕುರಿತಂತೆ ಅಂತಿಮ ನಿರ್ಧಾರವನ್ನು ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಥಿಕ-ಸಾಮಾಜಿಕ ಸಮೀಕ್ಷೆ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ನೀಡಲಾಗಿದೆ. ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಸಚಿವ ಸಂಪುಟದಲ್ಲಿಯೂ ಎಲ್ಲರೂ ಒಕ್ಕೊರಲಿನಿಂದ ಇದನ್ನು ಖಂಡಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ಸೆ.22ರಿಂದ ಸಮೀಕ್ಷೆ ಪ್ರಾರಂಭವಾಗಲಿದ್ದು, ಅದನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.