ಮಾನನಷ್ಟ ಮೊಕದ್ದಮೆ ಪ್ರಕರಣ | ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಡಿ.ಕೆ.ಶಿವಕುಮಾರ್
ಬೆಂಗಳೂರು : 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.
ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಸಲ್ಲಿಸಿರುವ ಖಾಸಗಿ ದೂರಿನ ಅನ್ವಯ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಪ್ರಕರಣಕ್ಕೆ ತಡೆ ನೀಡಿದೆ.