×
Ad

ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ LED ಪರದೆ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

Update: 2023-11-18 23:56 IST
Photo credit: X/ICC

ಬೆಂಗಳೂರು: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರವಿವಾರ ನಡೆಯಲಿರುವ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ರಾಜ್ಯ ಸರ್ಕಾರ ವ್ಯವಸ್ಥೆ ಕಲ್ಪಿಸಿದೆ.

ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್ಇಡಿ ಪರದೆಯಲ್ಲಿ ಫೈನಲ್ ಪಂದ್ಯದ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿರುವುದಾಗಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.

ಪಂದ್ಯ ವೀಕ್ಷಿಸಲು ದೊಡ್ಡ ಎಲ್ ಇಡಿ ಪರದೆ, ಅದಕ್ಕೆ ಬೇಕಾದ ಸೌಂಡ್ ವ್ಯವಸ್ಥೆ, ಆಸನಗಳ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, “ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ” ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News