×
Ad

ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

Update: 2024-08-17 21:21 IST

ಬೆಂಗಳೂರು : ಡಾ.ಚೇತನ್ ಸಿಂಗ್ ರಾಥೋರ್, ಡಾ.ಸಿಮಿ ಮರಿಯಮ್ ಜಾರ್ಜ್ ಸೇರಿ ರಾಜ್ಯದ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ಡಾ. ಚೇತನ್ ಸಿಂಗ್ ರಾಥೋರ್ ಅವರನ್ನು ಅಪರಾಧ ತನಿಖಾ ವಿಭಾಗದ ಡೆಪ್ಯುಟಿ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ, ಡಾ.ಸಿಮಿ ಮರಿಯಮ್ ಜಾರ್ಜ್ ಅವರನ್ನು ಬೆಂಗಳೂರು ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ, ಯಶೋಧಾ ವಂಟಗೋಡಿ ಅವರನ್ನು ಕಾರಾಗೃಹಗಳ ಪೊಲೀಸ್ ಅಧೀಕ್ಷಕರಾಗಿ, ರಾಜೀವ್ ಎಂ. ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ, ರಂಜಿತ್ ಕುಮಾರ್ ಬಂಡಾರು ಅವರನ್ನು ಚಿತ್ರದುರ್ಗದ ಪೊಲೀಸ್ ಅಧೀಕ್ಷಕರಾಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News