×
Ad

ರಾಜ್ಯದಲ್ಲಿರುವುದು ಡುಪ್ಲಿಕೇಟ್ ಮುಖ್ಯಮಂತ್ರಿ: ಕುಮಾರಸ್ವಾಮಿ ವಾಗ್ದಾಳಿ

Update: 2023-11-12 12:47 IST

ಬೆಂಗಳೂರು: ರಾಜ್ಯ​ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. 

ರವಿವಾರ ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಅಂತ ಇದ್ದಾರೆ. ಅವರು ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ.  ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ಈಗ ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ' ಎಂದು ತೀವ್ರ ವಾಗ್ದಾಳಿ ನಡೆಸಿದರು. 

''ತಮ್ಮ ಪಕ್ಷ ಅಧಿಕಾರಕ್ಕೆ ಬಂದರೇ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರು ತೆಲಂಗಾಣದಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ'' ಎಂದು ಕುಮಾರಸ್ವಾಮಿ ಒತ್ತಾಯಿಸಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News