×
Ad

ರಾಜ್ಯದಲ್ಲಿ ಜ.3ರಿಂದ ಸಾಧಾರಣ ಮಳೆ ಸಾಧ್ಯತೆ

Update: 2024-01-01 22:12 IST

ಸಾಂದರ್ಭಿಕ ಚಿತ್ರ | Photo: PTI 

ಬೆಂಗಳೂರು, ಜ.1: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಜ.3ರಿಂದ ಜ.7ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಬಾಗಲಕೋಟೆ, ಹಾವೇರಿಯಲ್ಲಿ ಜ.5ರಿಂದ ಮುಂದಿನ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News