‘ಜಾತಿಗಣತಿ’ ವಿವರವನ್ನು ಆನ್‍ಲೈನ್‍ನಲ್ಲಿಯೂ ಸಲ್ಲಿಸುವ ವ್ಯವಸ್ಥೆ ಇದೆ: ಸಿಎಂ ಸಿದ್ದರಾಮಯ್ಯ
Update: 2025-07-01 19:25 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ‘ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ನಡೆಸಲು ಆನ್‍ಲೈನ್ ಸೇರಿದಂತೆ ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳವಾರ ಇಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಮೀಕ್ಷೆ ನಡೆಸಲಾಗಿದೆ’ ಎಂಬ ಪೋಸ್ಟರ್‍ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿಲ್ಲ. ಬದಲಿಗೆ ಸಮೀಕ್ಷೆ ಮಾಡಲಾಗಿದೆ. ಹೀಗಾಗಿ ಪೋಸ್ಟರ್ ಹಾಕಿದ್ದಾರೆ ಎಂದರು.
ಶಿಕ್ಷಕರೇ ಖುದ್ದು ಪರಿಶೀಲನೆ ನಡೆಸಿ ಸಮೀಕ್ಷೆ ನಡೆಸಿದ್ದಾರೆ. ಅಲ್ಲದೆ, ಆನ್‍ಲೈನ್ ಮೂಲಕವೂ ಪರಿಶಿಷ್ಟ ಜಾತಿಯವರು ತಮ್ಮ ಜಾತಿಯ ವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ಶಿಕ್ಷಕರು ವಿವರಗಳನ್ನು ಪಡೆದಿದ್ದಾರೆ. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.