×
Ad

ಬೆಳಗಾವಿ ಕಾಂಗ್ರೆಸ್ ನಲ್ಲಿ ಯಾವ ಸಮಸ್ಯೆಯೂ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

Update: 2023-11-08 16:59 IST

ಬೆಂಗಳೂರು : ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಯಾವ ಸಮಸ್ಯೆಯೂ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ರಾಜಕೀಯ ಸಮಸ್ಯೆಗಳು ಮುಗಿಯಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಎಂದು ಮಾಧ್ಯಮದವರು ಕೇಳಿದಾಗ, ''ಸತೀಶ್ ಜಾರಕಿಹೊಳಿ ಅವರು ಹಾಗೆ ಹೇಳೋಕೆ ಸಾದ್ಯವೇ ಇಲ್ಲ. ಕಥೆಯೇ ಇಲ್ಲ ಮುಗಿಯೋದು ಏನಿದೆ?'' ಎಂದು ಪ್ರಶ್ನಿಸಿದರು.

ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ನಾನು ಗಮನಿಸಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ಯಾವುದೇ ಸಮಸ್ಯೆಯೂ ಇಲ್ಲ. ನನ್ನ ಜೊತೆಯೂ ಯಾವ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News