×
Ad

ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಯಡಿಯೂರಪ್ಪ ನೋಡದ ಹಳ್ಳಿಯೇ ಇಲ್ಲ: ಮಾಜಿ ಸಚಿವ ರೇಣುಕಾಚಾರ್ಯ

Update: 2023-09-10 22:43 IST

ದಾವಣಗೆರೆ.ಸೆ.10; ʻರಾಜ್ಯದಲ್ಲಿ ಬೂತ್ ಮಟ್ಟದಿಂದ ಬಿಜೆಪಿ ಕಟ್ಟಿ ಬೆಳಸಿದ್ದು ಯಡಿಯೂರಪ್ಪ, ಅದರೆ, ಅವರನ್ನೇ ಕಡೆಗಣಿಸಿದ್ದು ಬಿಜೆಪಿ ಸೋಲಿಗೆ ಕಾರಣʻ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆದ ಮೇಲೆ ಯಡಿಯೂರಪ್ಪ ಅವರನ್ನು ಈಗ ಮತ್ತೆ ಮುಂದೆ ತಂದಿದ್ದಾರೆ..ಆಡು ಮುಟ್ಟದ ಸೊಪ್ಪಿಲ್ಲ, ಬಿಎಸ್ ವೈ ನೋಡದ ಹಳ್ಳಿ ಇಲ್ಲ. ಗ್ರಾ.ಪಂ ಗೆಲ್ಲೋಕೆ ಆಗದೇ ಇರೋರು ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದರು. ಈಗ ವೋಟ್ ಬೇಕು ಎಂದು ಬಿಎಸ್ ವೈ ನಾಯಕತ್ವ ಎಂದು ಹೇಳುತ್ತಾ ಇದ್ದಾರೆ ಎಂದು ಬಿಜೆಪಿ ನಾಯಕರ ಮೇಲೆ ಹರಿಹಾಯ್ದರು.

ನಾನು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಾ ಆಕಾಂಕ್ಷಿಯಾಗಿದ್ದಾನೆ. ಪಕ್ಷದ ಟಿಕೆಟ್ ಬಗ್ಗೆ ಕಾದು ನೋಡುತ್ತೇನೆ. ಟಿಕೆಟ್ ಸಿಗದೇ ಇದ್ದರೆ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ.ನನ್ನ ಹೋರಾಟ ಯಾರ ವಿರುದ್ದ ಕತ್ತಿ ಮಸಿಯೋಕೆ ಅಲ್ಲ ಸಂಘಟನೆ ಉಳಿಯೋಕೆ ಕೆಲಸ ಮಾಡುತ್ತೇನೆ ಎಂದರು.

ಮಾಡಾಳು ವಿರೂಪಾಕ್ಷಪ್ಪರನ್ನು ಭೇಟಿ ಮಾಡುತ್ತೇನೆ, ನನ್ನ ಬಗ್ಗೆ ರೆಬೆಲ್ ರೇಣುಕಾಚಾರ್ಯ ಎಂದು ಕರೆದುಕೊಳ್ಳಲಿ ನಾನು ಹೆದರುವುದಿಲ್ಲ. ನನ್ನ ಮೇಲೆ ತೂಗುಗತ್ತಿ ತೂಗುತ್ತಾ ಇದೆ.ನಾನು ಯಾವುದಕ್ಕೂ ಹೆದರಲ್ಲ. ನೋಟೀಸ್ ಗೆ ಉತ್ತರ ಕೋಡೋದಿಲ್ಲ. ಮೊದಲು ಬಿಎಸ್ ವೈ ವಿರುದ್ದ ಮಾತನಾಡಿದವರ ಮೇಲೆ ಮೊದಲು ಕ್ರಮ ಕೈಗೊಳ್ಳಿ ಎಂದರು.

ಮಾಜಿ ಶಾಸಕ ಗುರುಸಿದ್ದನಗೌಡ ಉಚ್ಚಾಟನೆ ಕುರಿತು ಮಾತನಾಡಿದ ಅವರು, ನೋಟಿಸ್ ನೀಡದೇ ಉಚ್ಚಾಟನೆ ಮಾಡಿದ್ದು ಖಂಡನೀಯ ಚುನಾವಣೆಯ ಸಂದರ್ಭದಲ್ಲಿ ಓಡಾಟ ಮಾಡಿ ಪಕ್ಷ ಕಟ್ಟಿದವರು ಗುರುಸಿದ್ದನಗೌಡರು. ಚುನಾವಣೆಯಲ್ಲಿ ಅಭ್ಯರ್ಥಿ ವಿರುದ್ದ ಕೆಲಸ ಮಾಡಿದರೆ ನೋಟಿಸ್ ನೀಡಬೇಕು.ಆದರೆ ಯಾವುದೇ ನೋಟೀಸ್ ನೀಡದೆ ಪಕ್ಷದಿಂದ ಗುರುಸಿದ್ದನಗೌಡರನ್ನು ಕುಟುಂಬಸ್ಥರನ್ನು ಉಚ್ಚಾಟನೆ ಮಾಡಿದ್ದಾರೆ. ಡಾ.ರವಿಕುಮಾರ್ ಕೂಡ ಲೋಕಾಸಭಾ ಚುನಾವಣೆ ಟಿಕೆಟ್ ಅಕಾಂಕ್ಷಿ ಅವರು ಬೆಳೆಯಬಾರದು ಎಂದು ಉಚ್ಚಾಟನೆ ಮಾಡಿದ್ದು ಖಂಡನೀಯ ಎಂದರು.

ಮಾಜಿ ಶಾಸಕರಾದ ರವೀಂದ್ರನಾಥ, ಗುರುಸಿದ್ದನಗೌಡರು ಅಂತವರನ್ನು ಮೂಲೆಗುಂಪು ಮಾಡುತ್ತಾರೆ.ಜಿಲ್ಲೆಯ ಐದು ಶಾಸಕರು ಒಟ್ಟಾಗಿ ಸಚಿವ ಸ್ಥಾನ ಕೇಳಿದರೂ ಕೊಡಲು ಬಿಡಲಿಲ್ಲ.ಸಚಿವ ಸ್ಥಾನ ತಪ್ಪಿಸಿದರು. ಏಕಪಕ್ಷೀಯವಾಗಿ ಜಿಲ್ಲಾ ಅಧ್ಯಕ್ಷರು ನಿರ್ಧಾರ ಕೈಗೊಂಡಿದ್ದಾರೆ ಎಂದು ಜಿಲ್ಲಾಧ್ಯಕ್ಷರ ನಡೆಯನ್ನು ಖಂಡಿಸಿದರು.

ದೇಶಕ್ಕೆ ಮೋದಿ ಹೇಗೋ ರಾಜ್ಯಕ್ಕೆ ಯಡಿಯೂರಪ್ಪ. ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋದ ಮಹಾನ್ ನಾಯಕ. ವ್ಯವಸ್ಥಿತವಾಗಿ ಯಡಿಯೂರಪ್ಪ ನವರನ್ನು ತುಳಿಸುವ ಕೆಲಸ ಮಾಡಿದ್ದರು.ನಮ್ಮವರೇ ಆರೋಪ ಹೊರಿಸಿ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು ಎಂದು ರಾಜ್ಯ ಮುಖಂಡರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಶಾಸಕ ಗುರುಸಿದ್ದನಗೌಡರು. ಡಾ.ರವಿಕುಮಾರ್ ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News