×
Ad

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದರಲ್ಲಿ ತಪ್ಪೇನಿಲ್ಲ: ನಟ ಚೇತನ್‌ ಅಹಿಂಸಾ

Update: 2023-12-15 14:49 IST

ಬೆಂಗಳೂರು: ಸದನದಲ್ಲಿ ಕೆಲ ಕಾಂಗ್ರೆಸ್‌ ಸದಸ್ಯರು 'ಟಿಪ್ಪು ಸುಲ್ತಾನ್ ಹೆಸರನ್ನು ಮೈಸೂರು ಏರ್‌ ಪೊರ್ಟ್ ಗೆ  ಇಡಬೇಕು' ಎಂಬ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿರುವ ನಟ ಚೇತನ್‌ ಅಹಿಂಸಾ, " ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದರಲ್ಲಿ ತಪ್ಪೇನಿಲ್ಲ" ಎಂದು ಹೇಳಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯದ 4 ಪ್ರಮುಖ ಏರ್‌ ಪೋರ್ಟ್‌ ಗಳಿಗೆ ನಾಡಿನ ಮಹನಿಯರ ಹೆಸರು ಇಡುವ ಪ್ರಸ್ತಾಪಕ್ಕೆ ಸದನದಲ್ಲಿ ಸರ್ವಾನುಮತದ ಅಂಗೀಕಾರ ದೊರೆತಿತ್ತು.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಬರೆದುಕೊಂಡಿರುವ ಅವರು, " ಸರ್ಕಾರಿ ಕಟ್ಟಡಗಳಿಗೆ ಯೋಧರಿಗಿಂತ ಹೆಚ್ಚಾಗಿ ಅಹಿಂಸೆಯ ಐಕಾನ್ ಗಳ ಹೆಸರನ್ನು ಇಡಬೇಕೆಂದು ನಾನು ಭಾವಿಸುತ್ತೇನೆ. ಆದಾಗ್ಯೂ, ಟಿಪ್ಪುವಿನ ಜನ್ಮಸ್ಥಳವಾದ ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯೋಧ ಕೆಂಪೇಗೌಡರ ಹೆಸರನ್ನು ಇಡಲಾಗಿದೆ. ಆ ನಿದರ್ಶನದ ಪ್ರಕಾರ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದರಲ್ಲಿ ತಪ್ಪೇನಿಲ್ಲ" ಎಂದು ಅಭಿಪ್ರಾಯ ಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News