×
Ad

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನನ್ನ ಬಗ್ಗೆ ಚರ್ಚೆಯೇ ಆಗಿಲ್ಲ: ಸಚಿವ ಬೋಸರಾಜು

Update: 2023-07-29 13:21 IST

ರಾಯಚೂರು, ಜು.29: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನನಗೆ ಸಚಿವ ಸ್ಥಾನ ನೀಡಿರುವ ಬಗ್ಗೆ ಅಥವಾ ಇಲಾಖೆಯ ನಿರ್ವಹಣೆಯ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಪ್ರತಿಕ್ರಿಯಿಸಿದ್ದಾರೆ.

ಇಂದು ರಾಯಚೂರಿನಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರುಗಳು ಪಕ್ಷಕ್ಕೆ ನನ್ನ ಸೇವೆ ಮತ್ತು ನಿಷ್ಠೆಯನ್ನ ಮನಗಂಡು ಸಚಿವ ಸ್ಥಾನ ನೀಡಿದ್ದಾರೆ. ಸಚಿವನಾದ ನಂತರ ವಿಧಾನ ಪರಿಷತ್ ನಲ್ಲಿ ಸಭಾ ನಾಯಕನಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ಇಲಾಖೆಯಲ್ಲಿ ಶಾಸಕರುಗಳ ಕೆಲಸಗಳು ಮತ್ತು ಪತ್ರಗಳ ಫಾಲೋ ಅಪ್ ಗಾಗಿ ಸಿಬ್ಬಂದಿಯನ್ನು ನೇಮಿಸಿದ್ದು, ಅವರು ಶಾಸಕರುಗಳ ಮನವಿಗಳನ್ನ ಫಾಲೋಅಪ್ ಮಾಡಿ ಶಾಸಕರುಗಳಿಗೆ ಮಾಹಿತಿ ನೀಡುತ್ತಿದ್ದಾರೆ. ರಾಯಚೂರು ತಾಲೂಕನ್ನು ನನ್ನ ನೋಡಲ್ ತಾಲೂಕಾಗಿ ಆಯ್ಕೆ ಮಾಡಿಕೊಂಡಿದ್ದು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಸಹಕಾರದೊಂದಿಗೆ ಅಭಿವೃದ್ದಿಯ ಬಗ್ಗೆ ಹಲವಾರು ಕನಸುಗಳನ್ನ ಮತ್ತು ಗುರಿಯನ್ನ ಇಟ್ಟುಕೊಂಡಿದ್ದೇನೆ ಎಂದರು.

ಸಭಾ ನಾಯಕನಾಗಿದ್ದರಿಂದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಜೊತೆ ವೇದಿಕೆಯಲ್ಲಿದ್ದು ಎಲ್ಲರ ಮಾತುಗಳನ್ನ ಆಲಿಸಿದ್ದೇನೆ. ನನ್ನ ಸಚಿವ ಸ್ಥಾನ ಮತ್ತು ಇಲಾಖೆಯ ಬಗ್ಗೆ ಯಾವುದೇ ಶಾಸಕರು ಪ್ರಶ್ನೆ ಮಾಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದು ಸ್ಪಷ್ಟನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News