×
Ad

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ | ಪರಿಶೀಲಿಸಲು ಸೂಚನೆ; ಗೃಹ ಸಚಿವ ಜಿ.ಪರಮೇಶ್ವರ್‌

"ಯಾರು ಬೆದರಿಕೆ ಕರೆ ಮಾಡಿದ್ದಾರೆ, ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ"

Update: 2025-10-15 14:37 IST

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಯಾರು ಬೆದರಿಕೆ ಕರೆ ಮಾಡಿದ್ದಾರೆ, ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಆರೆಸ್ಸೆಸ್‌ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆ ಬಗ್ಗೆ ಸರಕಾರ ತೀರ್ಮಾನ ‌ಮಾಡುತ್ತದೆ. ಅದಕ್ಕೆ ಅವರಿಗೆ ಬೆದರಿಕೆ ಹಾಕುವುದು ಸರಿಯಲ್ಲ. ಎಲ್ಲವನ್ನೂ ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ ಎಂದು ಹೇಳಿದರು.

ಸರಕಾರ ಬಂದು ಎರಡೂವರೆ ವರ್ಷ ಕಳೆದಿದೆ. ಎಲ್ಲರು ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತಾಡಿದ್ದೇವೆ. ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು

ಯಾದಗಿರಿ ಎಎಸ್‌ಐ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದಾರೆಂಬ ಮಾಜಿ ಸಚಿವ ರಾಜುಗೌಡ ಆರೋಪದ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ವರದಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಬಿಜೆಪಿ ಅವರು ಟೀಕೆ ಮಾಡುವುದರಲ್ಲಿ ನಿಸ್ಸೀಮರು. ಅದು ಅವರ ಕರ್ತವ್ಯ ಕೂಡ ಹೌದು. ನಾನು ಹೇಳುವುದು ಒಂದೇ. ಪಾಸಿಟಿವ್ ಕ್ರಿಟಿಸಸಂ ಮಾಡಿ. ರಾಜಕೀಯಕ್ಕಾಗಿ ಟೀಕೆ ಮಾಡುವುದು ಬೇಡ ಎಂದರು.

ಉದ್ಯಮಿ ಕಿರಣ್ ಮಜುಂದಾರ್ ಶಾ ಟ್ವೀಟ್ ವಿಚಾರದ ಕುರಿತು ಪ್ರತಿಕ್ರಿಯಿಸಿ, ರಸ್ತೆ ಗುಂಡಿ ಮುಚ್ಚುವ ಕೆಲಸ ಪ್ರಾರಂಭ ಮಾಡಿದ್ದಾರೆ. ಇದಕ್ಕೆ ಸಮಯ ಹಿಡಿಯುತ್ತದೆ. ಅಷ್ಟರೊಳಗೆ ಪ್ರತಿಕ್ರಿಯಿಸುವುದು ಸರಿಯಲ್ಲ. ಕೆಲಸ ನಡೆಯುತ್ತಿರುವಾಗಲೇ ಟೀಕೆ ಮಾಡುವುದು ಸಮಂಜಸವಲ್ಲ. ಕೆಲಸ ಅಗಿಲ್ಲ ಎಂಬುದಾದರೆ ಮಾತನಾಡಲಿ ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರ ರಾಜಕಾರಣದಿಂದ ರಾಜ್ಯಕ್ಕೆ ಬರುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ಅವರು ನಮ್ಮ ದೊಡ್ಡ ನಾಯಕರು ಎಂದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News