×
Ad

ಸಂವಿಧಾನದ ತತ್ವ-ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯ: ರಾಜೀನಾಮೆ ಸಲ್ಲಿಸಿದ ಅಸಿಸ್ಟೆಂಟ್ ಕಮಾಂಡೆಂಟ್ ಸುಹೇಲ್

Update: 2023-11-28 22:53 IST

ಬೆಂಗಳೂರು: ‘ಸಂವಿಧಾನದ ತತ್ವಗಳು ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (1ನೇ ಪಡೆ, ಆಂತರಿಕ ಭಧ್ರತಾ ವಿಭಾಗ) ಅಸಿಸ್ಟೆಂಟ್ ಕಮಾಂಡೆಂಟ್ ಸುಹೇಲ್ ಅಹ್ಮದ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಸಂವಿಧಾನ ಕಾಯಕಲ್ಪ ಕಾರ್ಯಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸಂವಿಧಾನ ಕೊಡುಗೆಯಾಗಿ ನೀಡಿದ ಹುದ್ದೆಯನ್ನು ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ಈ ಮಹತ್ವದ ದಿನದಂದು ಸಮರ್ಪಿಸಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ನವೆಂಬರ್ 26ರಂದು ಪತ್ರ ಬರೆದಿದ್ದಾರೆ.

ಈ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ಆಡಳಿತ ವಿಭಾಗ) ಪತ್ರ ರವಾನೆ ಮಾಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News