ರೋಹಿಣಿ ಸಿಂಧೂರಿ ಸಹಿತ ಮೂವರು ಐಎಎಸ್ ಅಧಿಕಾರಿಗಳು ವರ್ಗಾವಣೆ
Update: 2025-06-12 13:55 IST
ರೋಹಿಣಿ ಸಿಂಧೂರಿ
ಬೆಂಗಳೂರು : ರೋಹಿಣಿ ಸಿಂಧೂರಿ ಸಹಿತ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಗುರವಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೃಷಿ ಇಲಾಖೆಯ (ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ) ಕಾರ್ಯದರ್ಶಿ ಹುದ್ದೆಯಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಐಎಎಸ್ ಅಧಿಕಾರಿ ಅಕ್ರಂ ಪಾಷಾ ಅವರನ್ನು ಕೆಎಸ್ಆರ್ಟಿಸಿ ಎಂಡಿ ಆಗಿ ನೇಮಕ ಮಾಡಲಾಗಿದೆ. ಐಎಎಸ್ ಅಧಿಕಾರಿ ಶೆಟ್ಟಣ್ಣನವರ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ಡಿ.ರೂಪಾ :
ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ