ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
Update: 2025-10-06 20:17 IST
ಬೆಂಗಳೂರು: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಪ್ರವಾಸೋದ್ಯಮ ಇಲಾಖೆಯ ಸರಕಾರದ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಶಿವಕುಮಾರ್ ಕೆ.ಬಿ. ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಆರೋಗ್ಯ ಮತ್ತು ಶಿಕ್ಷಣ) ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಆರೋಗ್ಯ ಮತ್ತು ಶಿಕ್ಷಣ) ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.