×
Ad

ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2024-04-04 19:55 IST

ಬೆಂಗಳೂರು: ರಾಜ್ಯ ಸರಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ(ಸಂಚಾರ)ದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ಸಿಐಡಿ ಅರಣ್ಯ ವಿಭಾಗದ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ಹಾಗೂ ಮೈಸೂರಿನ ರಾಜ್ಯ ಪೊಲೀಸ್ ಅಕಾಡೆಮಿಯ ನಿರ್ದೇಶಕ ಲೋಕೇಶ್ ಭರಮಪ್ಪ ಜಗಲಾಸರ್ ಅವರನ್ನು ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮೈಸೂರಿನ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಹಾಗೂ ಪ್ರಾಂಶುಪಾಲರಾದ ಗೀತಾ ಎಂ.ಎಸ್. ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಯ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News