ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
Update: 2025-01-17 20:03 IST
ಬೆಂಗಳೂರು: ರಾಜ್ಯ ಸರಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎನ್.ಸತೀಶ್ ಕುಮಾರ್ ಅವರನ್ನು ಬೆಂಗಳೂರು ಕೇಂದ್ರ ಕಚೇರಿ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಕೇಂದ್ರ ಕಚೇರಿ ಐಜಿಪಿಯಾಗಿದ್ದ ಡಾ.ಬಿ.ಆರ್. ರವಿಕಾಂತೇಗೌಡ ಅವರನ್ನು ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ವರ್ಗಾವಣೆ ಮಾಡಿದ್ದಾರೆ.
ದಾವಣಗೆರೆ ಪೂರ್ವ ವಲಯ ಐಜಿಪಿ ಬಿ.ರಮೇಶ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗದ ಜಂಟಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.