×
Ad

ಹುಲಿ ಉಗುರು ಪ್ರಕರಣ: ಅರಣ್ಯಾಧಿಕಾರಿಗಳ ವಿರುದ್ಧ ಹೈಕೋರ್ಟ್ ಮೊರೆ ಹೋದ ನಟ ಜಗ್ಗೇಶ್

Update: 2023-10-26 18:27 IST

ಬೆಂಗಳೂರು, ಅ.26: ಹುಲಿ ಉಗುರಿನ ಲಾಕೆಟ್ ಧರಿಸಿದ ಪ್ರಕರಣದಲ್ಲಿ ಮನೆ ಶೋಧ ನಡೆಸಿದ ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. 

ನೋಟಿಸ್‌ಗೆ ಉತ್ತರಿಸುವ ಮೊದಲೇ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ನಟ ಜಗ್ಗೇಶ್ ಆರೋಪಿಸಿದ್ದಾರೆ. ಅಲ್ಲದೆ, ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದುಪಡಿಸಬೇಕು. ನೋಟಿಸ್‌ಗೆ ಉತ್ತರಿಸುವ ಮೊದಲೇ 14 ಮಂದಿ ಅಧಿಕಾರಿಗಳ ತಂಡ ಮನೆ ಮೇಲೆ ದಾಳಿ ನಡೆಸಿದೆ. 

 ಮನೆಯಲ್ಲಿನ ಎಲ್ಲ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಹಳೆಯ ಸಂದರ್ಶನದಲ್ಲಿ ಹೇಳಿದ ಮಾತುಗಳನ್ನು ಆಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News