×
Ad

ತೀರ್ಥಹಳ್ಳಿ: ಒಂದೇ ಕುಟುಂಬದ ಮೂವರು ಸಜೀವ ದಹನ

Update: 2023-10-08 09:27 IST

 ಶಿವಮೊಗ್ಗ, ಅ.8: ಒಂದೇ ಮನೆಯ ಮೂವರು ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಗಣಪತಿ ಕಟ್ಟೆ ರೈಸ್ ಮಿಲ್ ಬಳಿ ಶನಿವಾರ ರಾತ್ರಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಅವರ ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳಿವೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News