×
Ad

ಟಿ.ಎನ್.ಸೀತಾರಾಂ ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-12-10 19:48 IST

ಬೆಂಗಳೂರು: ಚಲನಚಿತ್ರ ನಿರ್ದೇಶಕ ಟಿ.ಎನ್.ಸೀತಾರಾಂ ಅವರೊಂದಿಗೆ 4 ದಶಕಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನ ವತಿಯಿಂದ ಆಯೋಜಿಸಿದ್ದ ಟಿ.ಎನ್.ಸೀತಾರಾಂ ಅವರ ‘ನೆನಪಿನ ಪುಟಗಳು’ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿ.ಎನ್.ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ಅವರ ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ, ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ ಎಂದರು.

ಟಿ.ಎನ್.ಸೀತಾರಾಂ, ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿಯಿದ್ದಿದ್ದರೇ ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು. ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನುಅತ್ಯಂತ ಸಂತೋಷದಿಂದ ಬಿಡುಗಡೆ ಮಾಡಿರುವುದಾಗಿ ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News