×
Ad

ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಛತೆ: ಮಾಲೂರು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಸಹಿತ ಮೂವರ ಅಮಾನತು

Update: 2023-12-17 14:14 IST

ಕೋಲಾರ, ಡಿ.17: ಶಾಲಾ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಈ ರೀತಿಯ ಘಟನೆಗಳು ಜರುಗದಂತೆ ಮುಂದೆ ಎಚ್ಚರಿಕೆ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶಾಲಾ ಆವರಣ ಸ್ವಚ್ಛತೆ ಹಾಗೂ ಇಂಗು ಗುಂಡಿಗಳನ್ನು ಸ್ವಚ್ಛತೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಾಲೂರು ತಾಲೂಕಿನ ಯಲುಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲೆ ಭಾರತಮ್ಮ ಪಿ. ಪ್ರಭಾರ ನಿಲಯಪಾಲಕ ಮಂಜುನಾಥ್ ಹಾಗೂ ಹಾಗೂ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಎಂಬವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News